ವರ್ಕಾಡಿ : ಇಲ್ಲಿನ ಎಸ್.ಎಸ್.ಎ. ಎಲ್.ಪಿ.ಶಾಲೆ ಮುಡೂರುತೋಕೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಾರ್ಡ್ ಸದಸ್ಯರಾದ ಶ್ರೀ ಅಬ್ದುಲ್ ಲತೀಫ್ ರವರು ಧ್ವಜಾರೋಹಣ ಗೈದರು. ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಹರಿತ ಕರ್ಮ ಸೇನಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.ಸ್ವಾತಂತೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ಬಹುಮಾನ ವಿತರಣೆ ಕೂಡ ಜರಗಿತು. ಶಾಲಾ ಮಾತೃ ಪಿಟಿಎ ಅದ್ಯಕ್ಷೆ ಶ್ರೀಮತಿ ಸರಿತಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಯರದ ಶ್ರೀ ಶೈಲೇಶ್ ಸ್ವಾಗತಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಚಿತ್ರಾ ನೀರೂಪಿಸಿ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ವಂದಿಸಿದರು.









































































No comments:
Post a Comment