Tuesday 26 July 2016

ಕಾರ್ಗಿಲ್ ವಿಜಯ ದಿನ



ಕಾರ್ಗಿಲ್ ಯುದ್ಧದ ವಿಜಯ ದಿವಸ. ಯುದ್ಧವಾಗಿ 17ವರ್ಷಗಳೇ ಕಳೆದಿವೆ. ತನ್ನಿಮಿತ್ಯ ಈ ಲೇಖನ
ವೀರ ಯೋದರಿಗೆ ಗೌರವದ ನಮನ.
ಕಾಶ್ಮೀರದ ಶ್ರೀನಗರದಿಂದ 205ಕಿ.ಮೀ.ಗಳ ದೂರದಲ್ಲಿರುವ ಕಾರ್ಗಿಲ್ ಕಠಿಣವಾದ ನೀರ್ಗಲ್ಲುಗಳಿಂದ ಆವೃತವಾದ, ಪ್ರಪಂಚದ ಕೆಲವು ಅತ್ಯಂತ ಎತ್ತರದ ಪರ್ವತಗಳಿಂದ ಕೂಡಿದ ಲಡಾಖ್ ಶ್ರೇಣಿಗೆ ಸೇರಿದ ಪ್ರದೇಶ. ಶ್ರೀನಗರ ಮತ್ತು ಲೇಹ್ ಪ್ರದೇಶಕ್ಕೆ ಇರುವ ಏಕೈಕ ಭೂಮಾರ್ಗ. ಅತ್ಯಂತ ಕ್ಲಿಷ್ಟ ಮತ್ತು ದುರ್ಗಮವಾದ ಭೂ ಸರಹದ್ದು. ವರ್ಷದ ಮುಕ್ಕಾಲು ಅವಧಿಯಲ್ಲಿ, 084 ದೀಗ್ರಿ ಸೆಲ್ಸಿಯಸ್ ತಾಪಮಾನವಿರುವ ಶೀತಲ ಮರಭೂಮಿ. 160ಕಿ.ಮೀ.ಗಳ ಹಿಮಚ್ಛಾದಿತ ಪರ್ವತ ಹೊಂದಿರುವ ಊಹಾತೀತ ಸ್ಥಳ.



`ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಖೂ. ಸಿಯಾಚಿನ್ ನೀರ್ಗಲ್ಲಿನ ಮೇಲೆ ಸಂಪೂರ್ಣ ಒಡೆತನ ಹೊಂದಬೇಕೆಂಬ ದುರಾಸೆಗೆ ಮತ್ತು ಅಂತಾರಾಷ್ಟ್ರೀಯ ಗಮನ ತನ್ನತ್ತ ಸೆಳೆದುಕೊಳ್ಳಲು ಪಾಕ್ ಈ ಪ್ರದೇಶಕ್ಕೆ ತನ್ನ ಸೇನೆ ನುಗ್ಗಿಸಿತ್ತು. ಈ ಆಕ್ರಮಣಕ್ಕೆ ಪಾಕಿಸ್ತಾನಕ್ಕೀ ಸೇನೆ ಕೊಟ್ಟ ಹೆಸರು `ಆಪರೇಷನ್ ಬದ್ರ್'.
ಭಾರತೀಯ ಭೂಸೇನೆ ಮತ್ತು ವಾಯುಸೇನಾ ಪಡೆಗಳು ಜಂಟಿಯಾಗಿ ಮೇ ಮತ್ತು ಜುಲೈ 1999ರಲ್ಲಿ ಜಯಿಸಿದ್ದು ಕಾರ್ಗಿಲ್ ಕದನ. ಈ ಕ್ರಿಯೆಗೆ ಕೊಟ್ಟ ನಾಮಧೇಯ `ಆಪರೇಶನ್ ವಿಜಯ್'. ಭಾರತೀಯ ಸೇನಾ ಇತಿಹಾಸದಲ್ಲೇ ಅತ್ಯಂತ ಮಹತ್ತರವಾದ ವಿಜಯವದು. ಸಮುದ್ರಮಟ್ಟದಿಂದ ಅತೀ ಎತ್ತರ ಪ್ರದೇಶದಲ್ಲಿ ನಡೆದ ಮೊದಲ ಯುದ್ಧವೂ ಹೌದು.
60ದಿನಗಳ ಕಾಲ ರಾತ್ರಿ ಹಗಲೂ ಸತತ ಕಾದಾಟದ ನಂತರ 572 ಭಾರತೀಯ ಯೋಧರು ದೇಶಕ್ಕಾಗಿ ಪ್ರಾಣ ತೆತ್ತಿದ್ದಕ್ಕೆ 1999ರ ಜುಲೈ 26ರಂದು ವಿಜಯ ಸಿಕ್ಕಿತು. ಸಿಪಾಯಿಗಳ ಗೌರವಾರ್ಥವಾಗಿ ಅಂದಿನಿಂದ ಈ ದಿನವನ್ನು ದೇಶದಾದ್ಯಂತ `ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುತ್ತದೆ.
ಕಾರ್ಗಿಲ್ ರಣಾಂಗಣದಲ್ಲಿ ಜೀವದ ಹಂಗು ತೊರೆದು ಹೋರಾಡಿ ಮಡಿದ ಹಲವಾರು ಯೋಧರ ಜೀವನಗಾಥೆಗಳು ಸಂಕ್ಷಿಪ್ತವಾಗಿ ಬಿಂಬಿಸುವ ಪ್ರಯತ್ನ ಇಲ್ಲಿದೆ.
ಜಸ್ವಿಂದರ್ ಸಿಂಗ್ ಭರವಸೆ:
"ನೀನೆನೂ ಹೆದರಬೇಕಾಗಿಲ್ಲ. ನಾನು ಕಾಶ್ಮೀರದಲ್ಲಿ ಮೂರು ವರ್ಷಗಳ ಕಾಲ ಉಗ್ರಗಾಮಿಗಳ ವಿರುದ್ಧ ಹೋರಾಡಿರುವೆ" - ಸೈನಿಕ ಸಮವಸ್ತ್ರದ ತೋಳು ಮಡಚುತ್ತ ಕಂಬನಿದುಂಬಿದ ತನ್ನ ೨೦ರ ಹರೆಯದ ಪತ್ನಿ ಗುರುದಯಾರ್ ಕೌರ್ಗೆ ಸಿಪಾಯಿ ಜಸ್ವಿಂದರ್ ಸಿಂಗ್ ಬೆಚ್ಚನೆಯ ಭರವಸೆ ಇತ್ತ. ಆತ ಪಾಕ್ ಪಡೆಗಳನ್ನು ಬಲಿ ತೆಗೆದುಕೊಳ್ಳಲು ಕಾರ್ಗಿಲ್ ಯುದ್ಧಭೂಮಿಗೆ ಹೊರಟಿದ್ದ.
ಕೌರ್ ಜಸ್ವಿಂದರ್ಸಿಂಗ್ನನ್ನು ಮದುವೆಯಾಗಿ ಇನ್ನೂ ನಾಲ್ಕು ತಿಂಗಳು ಕಳೆದಿತ್ತಷ್ಟೆ. ಕಂಗಳ ತುಂಬಾ, ಮನದ ತುಂಬಾ ಅದೇನೇನೋ. ದಾಂಪತ್ಯ ಜೀವನದ ಹೊಂಗನಸುಗಳನ್ನು ತುಂಬಿಕೊಂಡಿದ್ದಳು. ಯುದ್ಧ ಮುಗಿದು ಪತಿ ಮನೆಗೆ ಮರಳಿದರೆ ಸಾಕು, ತಾನು ಕಟ್ಟಿಕೊಂಡ ಒಂದಿಷ್ಟು ಕನಸುಗಳಾದರೂ ನನಸಾಗಬಹುದೆಂಬ ಲೆಕ್ಕಾಚಾರ ಹಾಕಿದ್ದಳು.
ಗುರುದಯಾರ್ ಕೌರ್ ತನ್ನ ಪತಿ ಜಸ್ವಿಂದರ್ ಸಿಂಗ್ನನ್ನು ಮದುವೆಯಲ್ಲಿ ನೋಡಿದ್ದೆಷ್ಟೋ ಅಷ್ಟೆ. ಅದೇ ಆಕೆಯ ದಾಂಪತ್ಯ ಬದುಕಿನ ಅಮೃತಘಳಿಗೆಗಳು. ಅನಂತರ ಆ ಅಮೃತ ಘಳಿಗೆಗಳು ಆಕೆಯ ಬಾಳಿನಲ್ಲಿ ಮತ್ತೆಂದೂ ಬರಲಿಲ್ಲ. ಜಸ್ವಿಂದರ್ ಸಿಂಗ್ ಪ್ಲೈವು ಡ್ ಪೆಟ್ಟಿಗೆಯೊಂದರಲ್ಲಿ ಹೆಣವಾಗಿ ಮನೆಯಂಗಳಕ್ಕೆ ಬಂದಿಳಿದಾಗ ಆಕೆ ಆ ಕ್ರೂರ ಸತ್ಯವನ್ನು ಎದುರಿಸಬೇಕಾಯಿತು.
ಜಸ್ವಿಂದರ್ ಸಿಂಗ್ ತಂದೆ ಜೋಗಿಂದರ್ ಸಿಂಗ್ ಪಂಜಾಬಿನ ಒಬ್ಬ ಆಂಧ್ರ ರೈತ. ಮೂರು ಎಕರೆ ಜಮೀನು ಹೊಂದಿರುವ ಅತನಿಗೆ ಮೂವರು ಗಂಡುಮಕ್ಕಳು. ಈ ಜಮೀನು ಮೂವರ ಮಕ್ಕಳ ಬದುಕಿಗೆ ಏನೇನೂ ಸಾಲದೆಂದು ನಿರ್ಧರಿಸಿದ ಕಿರ್ಯ ಜಸ್ವಿಂದರ್ ಸಿಂಗ್ ೧೭ನೇ ವಯಸ್ಸಿನಲ್ಲೇ ಮನೆಬಿಟ್ಟು ಹೊರಟ. ಅವನನ್ನು ಬರಸೆಳೆದು ಅಪ್ಪಿಕೊಂಡಿದ್ದು ಭಾರತೀಯ ಸೇನೆ. ಆತನ ಸಾಹಸದ ಬದುಕಿಗೆ ಆಸರೆ ನೀಡಿತು.
ಮೇ 21ರಂದು ಜಸ್ವಿಂದರ್ ಸಿಂಗ್ ಸಾಹಸದ ಬದುಕಿನ ಕೊನೆಯ ಅಧ್ಯಾಯ. ಆಯಕಟ್ಟಿನ ಟೈಗರ್ಹಿಲ್ಸ್ ಶತ್ರುಗಳ ವಶದಲ್ಲಿತ್ತು. ಅದನ್ನು ಹೇಗಾದರೂ ವೈರಿಗಳಿಂದ ಬಿಡಿಸಿಕೊಳ್ಳಬೇಕಾಗಿತ್ತು. ಆದರೆ ಅದೇನು ಅಷ್ಟು ಸುಲಭವೇ? ದುರ್ಗಮ ಶಿಖರ. ಕಡಿದಾದ ಹಾದಿ. ಶಿಖರದೆತ್ತರದಲ್ಲಿ ಬಂಕರ್ಗಳಲ್ಲಿ ಮದ್ದುಗುಂಡು ತುಂಬಿಕೊಂಡು ಕಾದಿರುವ ವೈರಿಪಡೆ. ವೈರಿಪಡೆಯ ಈ ದುರ್ಗಮ ಅಡಗುದಾಣ ಅರಸಿ ಹೊರಟ ಸಿಪಾಯಿ ಜಸ್ವಿಂದರ್ ಸಿಂಗ್ ಕೊನೆಗೂ ಮೇಲಕ್ಕೆ ತಲುಪಿದ. ಟೈಗರ್ ಶಿಖರವೇರಿದ. ಅಷ್ಟರಲ್ಲಿ ಆತನ ಎರಡೂ ತೊಡೆಗಳಿಗೆ ಎಲ್ಲಿಂದಲೋ ಗುಂಡುಗಳು ಬಂದು ಬಡಿದವು. ತೊಡೆಗಳು ಛಿದ್ರಛಿದ್ರ. ಆದರೆ ಮನಸ್ಸು ಮಾತ್ರ ಇನ್ನೂ ಭದ್ರ. ಕೊನೆಯುಸಿರಿನವರೆಗೂ ಕೈಯಲ್ಲಿದ್ದ ಬಂದೂಕು ವೈರಿಪಡೆಯ ಮೇಲೆ ಬೆಂಕಿ ಕಾರುತ್ತಲೇ ಇತ್ತು.
ಗುರುದಯಾಲ್ ಕೌರ್ ಮನೆಯಲ್ಲಿ ಟಿವಿ ಮುಂದೆ ಕುಳಿತಿದ್ದಳು. ಕಾರ್ಗಿಲ್ ಕದನದ ಸುದ್ದಿಗಳನ್ನು ಕಾತರದಿಂದ ಆಲಿಸುತ್ತಿದ್ದಳು. ತನ್ನ ಪತಿ ಸಿಪಾಯಿ ಜಸ್ವಿಂದರ್ ಸಿಂಗ್ ಬಗ್ಗೆ ಏನಾದರೂ ಸುದ್ಧಿ, ಚಿತ್ರ ಬರುವದೋ ಎಂದು ಕಾಯುತ್ತಿದ್ದಳು. ಅವಳ ನಿರೀಕ್ಷೆ ಸುಳ್ಳಾಗಲಿಲ್ಲ. ಒಂದೆರಡು ದಿನದಲ್ಲೇ ಜಸ್ವಿಂದರ್ ಸಿಂಗ್ಮನೆಯಂಗಳಕ್ಕೆ ಬಂದಿಳಿದ. ಆದರೆ ಶವವಾಗಿ ಪೆಟ್ಟಿಗೆಯೊಂದರಲ್ಲಿ ಮಲಗಿ. ಪಂಜಾಬಿನ ಧೂಳುತುಂಬಿದ ಹಳ್ಳಿ ಮುನ್ನೆಯ ಆ ಸಣ್ಣ ಮನೆಯಂಗಳದಲ್ಲಿ ಕುಳಿತು ಆಗಸದತ್ತ ದೃಷ್ತಿ ನೆಟ್ಟಿರುವ ಕೌರ್ ಈಗ ಮ್ಲಾನವದನೆ.
ಜಸ್ವಿಂದರ್ ಸಿಂಗ್ ವೀರಮರಣ ಅಪ್ಪಿದ್ದಕ್ಕೆ ತಂದೆಗೆ ದುಃಖವಿಲ್ಲ. "ಶತ್ರುವಪಡೆಯನ್ನು ಹಿಮ್ಮೆಟ್ಟಿಸಲು ಯಾರಾದರೂ ಹೋರಾಡುತ್ತಾ ಸಾಯಲೇಬೇಕು." ಎಂದು ತಮ್ಮಷ್ಟಕ್ಕೆ ಹೇಳಿಕೊಳ್ಳುತ್ತಾರ್ಎ.
"ನಮ್ಮ ಬದುಕಿಗೆ ಇದೊಂದು ಬರಸಿಡಿಲಿನಂತೆ ಬಂದಪ್ಪಳಿಸಿದ ದುರಂತ. ಆದರಿದು ದೇಶಕ್ಕೆ ಉತ್ತಮ ಭವಿಷ್ಯ ತಂದುಕೊಡಬಹುದೇನೋ. ಅದೇ ನಮಗೆ ಈಗುಳಿದಿರುವ ಸಮಾಧಾನ." - ದಾಂಪತ್ಯದ ಸವಿಯನ್ನೇ ಉಣ್ಣದ ಕೌರ್ ಉಮ್ಮಳಿಸಿ ಬರುವ ದುಃಖವನ್ನು ತಡೆದೊತ್ತಿ ಹೇಳುತ್ತಾಳೆ.
ಹೌದು, ಜಸ್ವಿಂದರ್ ಸಿಂಗ್ನ ಸಾವು ವ್ಯರ್ಥವಾಗುವದಿಲ್ಲ.
ಕಾರ್ಗಿಲ್ ಕದನ : ಕೆಲವು ವಿವರಗಳು
ಕಾಲಮಿತಿ :
ಯುದ್ಧ ನಡೆದ ಒಟ್ಟು ಅವಧಿ : 74 ದಿನಗಳು
ಯುದ್ಧಕ್ಷೇತ್ರದ ಒಟ್ಟು ಅವಧಿ : 150 ಕಿ.ಮೀ.
ಬಳಸಿದ ಬಲಾಬಲ
ಭಾರತೀಯ ಸೇನೆ : 2೦,೦೦೦
ಪಾಕಿಸ್ತಾನಿ ಸೇನೆ : ಅಘೋಷಿತ
ಅತಿಕ್ರಮಣಕಾರಿಗಳು : 15೦೦

No comments:

Post a Comment